
ಉಡುಪಿ, ನ.28: ಎರಡು ದಿನ ಹಿಂದಷ್ಟೇ ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮ ಧ್ವಜ ಸ್ಥಾಪಿಸಿದ್ದ ಪ್ರಧಾನಿ ಮೋದಿ ಇಂದು ಕೃಷ್ಣನೂರು ಉಡುಪಿಗೆ ಆಗಲಿಸುತ್ತಿದ್ದಾರೆ.
ಕೃಷ್ಣಮಠದ ವಿಶ್ವಪರ್ಯಾಯದ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಜನ ಭಕ್ತರು ಇಂದು ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಗವದ್ಗೀತೆ ಪಠಿಸಲಿದ್ದಾರೆ. ಇದೇ ಐತಿಹಾಸಿಕ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಾಕ್ಷಿ ಆಗಲಿದ್ದಾರೆ. ಅಲ್ಲದೇ ಸ್ವತಃ ಮೋದಿಯೇ ಗೀತೆಯಲ್ಲಿ ಹೆಚ್ಚಿನ ಮಹತ್ವ ಹೊಂದಿರುವ 15 ನೇ ಅಧ್ಯಾಯದ ಕೊನೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ.
ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣಗೊಂಡ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದ್ದು, ಇದು ಇವತ್ತು ಉದ್ಘಾಟನೆಯಾಗಲಿದೆ. ನಂತರ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.
ಪ್ರಧಾನಿ ಮೋದಿಯನ್ನ ಸ್ವಾಗತಿಸಲು ಉಡುಪಿ ಸಜ್ಜಾಗಿ ನಿಂತಿದ್ದು, ಪ್ರಧಾನಿ ಮೋದಿ ಕೂಡ ಈ ಬಗ್ಗೆ ಕನ್ನಡದಲ್ಲೇ ಎಕ್ಸ್ ಸಂದೇಶ ಪ್ರಕಟಿಸಿ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
.
