Share this news

ಮೂಡಬಿದಿರೆ : ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ ಯುವತಿಯೊಬ್ಬಳನ್ನು ಅಡ್ಡಗಟ್ಟಿ ಹಲ್ಲೆಗೈದ ಘಟನೆ ಮೂಡಬಿದಿರೆ ಪೊಲೀಸ್ ಠಾಣೆ ರಸ್ತೆಯಲ್ಲಿ ಗುರುವಾರ ರಾತ್ರಿ  ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕ ಇರುವೈಲಿನ ಅರ್ಷದ್ (21) ನನ್ನು ಪೊಲೀಸರು ಬಂಧಿಸಿದ್ದಾರೆ.

ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೆಲವು ಸಮಯದ ಹಿಂದೆ ಕೆಲಸ ಬಿಟ್ಟು ಮನೆಯಲ್ಲೇ ಇದ್ದು, ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಯುವತಿ ಪ್ರಾಂತ್ಯ ಗ್ರಾಮದ ಟೈಲರ್‌ ಅಂಗಡಿಯೊಂದಕ್ಕೆ ಹೋಗುತ್ತಿರುವಾಗ ಕ್ಲಾಸ್‌ಮೇಟ್‌ ಆಗಿದ್ದ ಅರ್ಷದ್‌ (21) ಅಡ್ಡಗಟ್ಟಿ “ನೀನು ನನ್ನನ್ನು ಯಾಕೆ ಪ್ರೀತಿಸುತ್ತಿಲ್ಲ’ ಎಂದು ಕೋಟೆಬಾಗಿಲಿನ ಯುವತಿ ಮೈ ಮೇಲೆ ಕೈ ಹಾಕಿ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ನೀಡಿದ ದೂರಿಂನಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದಾಗ ಯುವತಿ ಬೊಬ್ಬೆ ಹೊಡೆದ ಕೂಡಲೇ ಟೈಲರ್‌ ಹೊರಬಂದಾಗ ಆರೋಪಿ ಸ್ಥಳದಿಂದ ಓಡಿಹೋದನೆಂದೂ ದೂರಿನಲ್ಲಿ ತಿಳಿಸಲಾಗಿದೆ. ಅಡ್ಡಗಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ವಶಕ್ಕೆ ಪಡೆಯಲಾಗಿದೆ.

ಹಿಂದೂ ಯುವತಿಯರನ್ನು ಗುರಿಯಾಗಿಸಿ ಪ್ರೀತಿ ಪ್ರೇಮ ಎಂಬ ನಾಟಕವಾಡಿ ಮೋಸಮಾಡಿ ಅವರನ್ನು ಮತಾಂತರ ಮಾಡುವ ಒಂದು ವ್ಯವಸ್ಥಿತ ಗುಂಪು ಇದೆ ಇದರ ಬಗ್ಗೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌ ಪ್ರಮುಖ ಶರಣ್‌ ಪಂಪ್‌ವೆಲ್‌ ತಿಳಿಸಿದ್ದಾರೆ.

 

                        

                          

                        

                       

Leave a Reply

Your email address will not be published. Required fields are marked *