ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಹೆಸರನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ್ ಪೂಜಾರಿ ಧನವಾದ ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಈ ಹಿಂದೆ ವಿಧಾನಪರಿಷತ್‌ಗೆ ಆಯ್ಕೆಯಾಗಿ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಹೈಕಮಾಂಡ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಿತ್ತು. ಅದರಂತೆ ಕೋಟ ಶ್ರೀನಿವಾಸ್ ಪೂಜಾರಿ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಇದೀಗ ಇವರನ್ನು ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
`