ಮೈಸೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.
ರಾಜ್ಯಪಾಲರು ಸಿಎಂ ಸಿದ್ದು ವಿರುದ್ಧ ತನಿಖೆಗೆ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟ ನಡೆಸಿದ್ದವು. ಇದೀಗ ಈ ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದುಗೆ ನೊಟೀಸ್ ಜಾರಿಗೊಳಿಸಿದ್ದು ಸಿಎಂಗೆ ಮತ್ತೆ ಆತಂಕ ಶುರುವಾಗಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ.6ರಂದು ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.ಸಿಎಂ ಅವರನ್ನು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿದೆ. ಕಳೆದ 40ವರ್ಷದ ಸಿದ್ದರಾಮಯ್ಯ ಅವರ ರಾಜಕಾರಣದಲ್ಲಿ ಇದು ಮೊದಲನೇ ವಿಚಾರಣೆಯಾಗಿದೆ. ಸೈಟ್ ವಾಪಸಾತಿಯಿಂದ ಪ್ರಕರಣ ತಿಳಿಯಾಯಿತು ಎನ್ನುವಾಗಲೇ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ