ಬೆಂಗಳೂರು: ಮುಡಾ ಹಗರಣಕ್ಕೆ ಸಂಬAಧಿಸಿದAತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಹೌದು ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್ ವಿಭಾಗೀಯಪೀಠ ನಿಗದಿಪಡಿಸಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ನ ವಿಭಾಗೀಯ ಪೀಠವು ನವೆಂಬರ್ 23ರಂದು ವಿಚಾರಣೆ ನಡೆಸಲಿದೆ.
ಜುಲೈ 26 ರಂದು ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ದೂರು ನೀಡಿದ ದಿನವೇ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವAತೆ ಸಿಎಂ ರಹಿತವಾದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವಾಗಿತ್ತು. ಆದರೂ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪಾಲಿಸದೇ ಲೋಪವೆಸಗಿದ್ದಾರೆ. 17 ಎ ಅಡಿಯಲ್ಲಿ ಪೊಲೀಸ್ ಅಧಿಕಾರಿ ರಾಜ್ಯಪಾಲರ ಅನುಮತಿ ಕೇಳಬೇಕು.
ಆದರೆ ಖಾಸಗಿ ವ್ಯಕ್ತಿಯ ದೂರು ಪರಿಗಣಿಸಿ ಅನುಮತಿ ನೀಡಲಾಗಿದೆ. ರಾಜ್ಯಪಾಲರು ಅನುಮತಿ ನೀಡುವಾಗ ವಿವೇಚನೆ ಬಳಸಿಲ್ಲ. ಈ ಅಂಶಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ಪರಿಗಣಿಸಿಲ್ಲ. ಏಕಸದಸ್ಯ ಪೀಠ ನ್ಯಾಯಾಂಗದ ಪರಿಶೀಲನಾ ಅಧಿಕಾರವನ್ನು ಸೂಕ್ತವಾಗಿ ಬಳಸಿಲ್ಲ. ಹೀಗಾಗಿ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಬೇಕು ಎಂದು ಸಿದ್ದರಾಮಯ್ಯ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ.