Share this news

ಬೆಂಗಳೂರು: ಮುಡಾ ಹಗರಣದ ಪ್ರಾಸಿಕ್ಯೂಷನ್​​ಗೆ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್​ ಮತ್ತೆ ಮುಂದೂಡಿದೆ. ಇಂದು(ಸೆ.09) ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು. ಇನ್ನು ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ. ಅಲ್ಲಿಯವರೆಗೆ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಸೋಮವಾರ ಹೈಕೋರ್ಟ್‌ ಕೈಗೆತ್ತಿಕೊಂಡಿತ್ತು.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಪ್ರಕರಣದ ವಿಚಾರಣೆಯನ್ನು ನಡೆಸಿತು. ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಶಶಿಕಿರಣ್ ಶೆಟ್ಟಿ ಅವರು ವಾದ ಮಂಡಿಸಿದರು.ಎಜೆ ಮಂಡಿಸಿದ ವಾದಲ್ಲಿ, ದೂರುದಾರರು ಲೋಕಾಯುಕ್ತರಿಗೆ ದೂರು ನೀಡಿದ ಬಳಿಕ ನಿರ್ದಿಷ್ಟ ಕಾಲದವರೆಗೆ ಕಾದಿಲ್ಲ. ಅಲ್ಲದೆ ತಕ್ಷಣವೇ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್ 17 ಎ ಅಡಿಯಲ್ಲಿ ರಾಜ್ಯಪಾಲರ ಪೂರ್ವಾನುಮತಿ ಕೋರಿದ್ದಾರೆ ಎಂದು ಉಲ್ಲೇಖಿಸಿದರು.

ಅಲ್ಲದೆ, ಈ ಪ್ರಕರಣದಲ್ಲಿ ತನಿಖಾಧಿಕಾರಿಯು ಪ್ರಾಥಮಿಕ ತನಿಖೆಯನ್ನು ನಡೆಸಿಲ್ಲ. ಪಿಸಿ ಕಾಯ್ದೆ ಸೆಕ್ಷನ್17 ಎ ಅಡಿಯಲ್ಲಿ ಪ್ರಾಸಿಕ್ಯೂಷನ್ ಮಂಜೂರಾತಿ ನೀಡುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಸ್‌ಒಪಿ ಅಡಿಯಲ್ಲಿ ರಾಜ್ಯಪಾಲರು ತನಿಖಾಧಿಕಾರಿಯಿಂದ ಪ್ರಕರಣದ ಕುರಿತಾಗಿ ಮಾಹಿತಿಯನ್ನು ಸಂಗ್ರಹಿಸಬೇಕಿತ್ತು ಎಂದರು.

 ದೂರದಾರ ಸ್ನೇಹಮಯಿ ಕೃಷ್ಣ ಪರವಾಗಿ ವಕೀಲೆ ಲಕ್ಷ್ಮೀ ಐಯ್ಯಂಗಾರ್ ವಾದ ಮಾಡಿದರೆ, ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಅಭಿಶೇಖ್ ಮನುಸಿಂಘ್ವಿ ಹಾಗೂ ಪ್ರೊ, ರವಿವರ್ಮಕುಮಾರ್ ಸೆಪ್ಟಂಬರ್ 12 ರಂದು ವಾದ ಮಂಡಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಸೆ. 12 ಕ್ಕೆ ವಿಚಾರಣೆಯನ್ನು ಮುಂದೂಡಿದರು. ಅಲ್ಲಿಯವರೆಗೆ ಇತರ ನ್ಯಾಯಾಲಯಗಳು ಮಧ್ಯಪ್ರವೇಶ ಮಾಡದಂತೆ ನೀಡಿದ್ದ ಹಿಂದಿನ ತೀರ್ಪು ಜಾರಿಯಲ್ಲಿರುತ್ತದೆ. ಈ ಮೂಲಕ ಸೆಪ್ಟಂಬರ್ 12 ರಡರ ವರೆಗೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ್ ನೀಡಿದೆ.

 

 

 

 

    

                        

                          

                        

                       

Leave a Reply

Your email address will not be published. Required fields are marked *