ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಲೋಕಾಯುಕ್ತಕ್ಕೆ ದೂರುನೀಡಿದ್ದಾರೆ.
ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಲೋಕಾಯುಕ್ತಕ್ಕೆ ದೂರುನೀಡಿದ್ದಾರೆ ಎಂದು ವರದಿಯಾಗಿದೆ.
ಮಾಜಿ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿ, ಅವರನ್ನು ಬಂಧಿಸಬೇಕು. ಈ ಸಂಬಂಧ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.