Share this news

ಬೆಂಗಳೂರು : ಮುಡಾ ಹಗರಣಕ್ಕೆ ಸಂಬAಧಿಸಿದAತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಎನ್ನುವವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಮಧ್ಯೆ ಆಲಂ ಪಾಷಾ ಪ್ರಾಸಿಕ್ಯೂಷನ್ ಅನುಮತಿ ಇಲ್ಲದೆ ಸಿಎಂ ವಿರುದ್ಧ ಕೇಸ್ ಸ್ವೀಕರಿಸಬಾರದು ಎಂದು ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಇಂದು ವಿಚಾರಣೆ ನಡೆಸಿದ ಕೋರ್ಟ್, ಸಿಎಂ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಆಲಂ ಪಾಷಾ ಎನ್ನುವವರು ಪ್ರಾಸಿಕ್ಯೂಷನ್ ಗೆ ಅನುಮತಿ ಇಲ್ಲದೆ ಸಿಎಂ ಕೇಸ್ ಸ್ವೀಕರಿಸದಂತೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಯಾವ ಕಾನೂನಿನ ಅಡಿಯಲ್ಲಿ ನೀವು ಅರ್ಜಿ ಸಲ್ಲಿಸಿದ್ದೀರಾ ಎಂದು ಮಧ್ಯಂತರ ಅರ್ಜಿದಾರರಿಗೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪ್ರಶ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಆಲಂ ಪಾಷಾ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ ತಡೆಹಿಡಿಯಲು ಕೋರುತ್ತಿದ್ದಾರೆ ಹೀಗಾಗಿ ಆಲಂಪಾಷ ಅರ್ಜಿ ವಜಾಗೊಳಿಸಲು ಅರ್ಹ ಎಂದು ಆದೇಶಿಸಿದ್ದಾರೆ.

ವಿಚಾರಣೆ ಸಂದರ್ಭದಲ್ಲಿದಲ್ಲಿ ಪಿಸಿಆರ್ ಅಂದರೆ ಪಬ್ಲಿಕ್ ಕಂಟ್ರೋಲ್ ರೂಂ ಎಂದು ಆಲಂ ಪಾಷ ಹೇಳಿದಾಗ ಪಿ ಸಿ ಆರ್ ಎಂದರೇನು ಎಂದು ತಿಳಿಯದೆ ಅರ್ಜಿ ಸಲ್ಲಿಸಿದ್ದೀರಾ? ಕೋರ್ಟ್ ನಲ್ಲಿ ತಮಾಷೆ ಮಾಡುತ್ತಿದ್ದೀರಾ ಎಂದು ಜಡ್ಜ್ ತರಾಟೆಗೆ ತೆಗೆದುಕೊಂಡಿದ್ದಾರೆ.

                        

                          

                        

                          

 

`

 

Leave a Reply

Your email address will not be published. Required fields are marked *