Share this news

ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಪಕ್ಷದಲ್ಲಿಯೂ ಅಂತರ್ಯುದ್ಧಕ್ಕೆ ವೇದಿಕೆ ಮಾಡಿಕೊಟ್ಟಿದೆ. ಮುಡಾ ಕೇಸ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನಿಂದ ವ್ಯತಿರಿಕ್ತ ಆದೇಶ ಬಂದರೆ ಸಿಎಂ ಬದಲಾಗುತ್ತಾರೆಂಬ ಚರ್ಚೆ ನಡಯುತ್ತಿದೆ. ಹೀಗಾಗಿ ಸಿಕ್ಕರೆ ಯಾಕೆ ಬಿಡಬೇಕು ಎಂದು ನಾಯಕರೆಲ್ಲಾ ಸರದಿಯಲ್ಲಿ ನಿಂತಿದ್ದು, ಇದಕ್ಕಾಗಿ ನಾನೇ ಸೀನಿಯರ್ ಎಂಬ ಅಸ್ತ್ರ ಹೂಡುತ್ತಿದ್ದಾರೆ. ಇದರ ಜೊತೆಗೆ ಸಿಎಂಗೆ ಗೆಲುವು ಸಿಕ್ಕೇ ಸಿಗುತ್ತದೆ. ಮುಡಾ ಕೇಸ್‌ನಲ್ಲಿ ಸಿಎಂ ಪಾತ್ರವೇ ಇಲ್ಲ ಎಂದೂ ಹೇಳುತ್ತಿದ್ದಾರೆ.

ಮುಡಾ ಸಂಗ್ರಾಮ ಕೊನೆಯ ಹಂತಕ್ಕೆ ಬಂದಿದ್ದು, ತನಿಖೆಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು, ಬಹುತೇಕ ಅಂತ್ಯವಾಗಿದೆ. ಸಿಎಂ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ದೂರುದಾರರ ಪರ ವಕೀಲರು ವಾದ ಅಂತ್ಯಗೊಳಿಸಿದ್ದಾರೆ. ಇದೀಗ ಇಂದು ಮತ್ತೆ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುತ್ತಿದ್ದು, ಸಿಎಂ ಆತಂಕ ಹೆಚ್ಚಿಸಿದೆ.

ಮುಡಾ ಹಗರಣದಲ್ಲಿ ಹೈಕೋರ್ಟ್ ನಲ್ಲಿ ಮುಖ್ಯಮಂತ್ರಿ ಪರವಾಗಿಯೇ ತೀರ್ಪು ಬರಲಿದೆ ಎಂದು ಕಾಂಗ್ರೆಸ್ ನ ಅನೇಕ ನಾಯಕರು ಹೇಳುತ್ತಿದ್ದಾರೆ. ಆದರೆ, ಹೀಗೆಂದುಕೊAಡೇ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಜತೆಗೆ ವಿಚಾರಣೆ ಮೇಲೆಯೂ ಕಣ್ಣಿಟ್ಟಿದ್ದಾರೆ.

 

 

 

    

                        

                          

                        

                       

Leave a Reply

Your email address will not be published. Required fields are marked *