ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬAಧಿಸಿದAತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಮುಡಾ ಹಗರಣದ ತನಿಖಾ ಪ್ರಗತಿ ವರದಿಯನ್ನು ಇಂದು (ನ.26) ಸಲ್ಲಿಸುವಂತೆ ಹೈಕೋರ್ಟ್ ಲೋಕಾಯುಕ್ತರಿಗೆ ಸೂಚನೆ ನೀಡಿತ್ತು. ಈ ಆದೇಶವನ್ನೂ ಪ್ರಶ್ನಿಸಿ ಜಮೀನು ಮಾಲೀಕ ದೇವರಾಜು ಅರ್ಜಿ ಸಲ್ಲಿಸಿದ್ದಾರೆ. ಹಗರಣ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ಈ ತೀರ್ಪನ್ನೂ ಪ್ರಶ್ನಿಸಿ ದೇವರಾಜು ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 5 ರಂದು ನಡೆಸುವುದಾಗಿ ಹೈಕೋಟ್ ವಿಭಾಗೀಯ ಪೀಠ ಹೇಳಿದೆ.ಮುಡಾ ಹರಗಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10 ರಂದು ನಡೆಸಲಿದೆ.ಹೀಗಾಗಿ, ಲೋಕಾಯುಕ್ತ ಪೊಲೀಸರು ತನಿಖಾ ವರದಿಯನ್ನು ಹೈಕೋರ್ಟ್ ಗೆ ಡಿಸೆಂಬರ್ 10 ರಂದು ಸಲ್ಲಿಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇತ್ತು.ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಅಂದರೆ 14 ನಿವೇಶನ ಕೊಟ್ಟಿದ್ದಾರೆ ಇದು ಈಗ ಚರ್ಚೆಗೆ ಕಾರಣವಾಗಿದೆ. ವಿಜಯನಗರ ಬಡಾವಣೆಯಲ್ಲಿ 14 ನಿವೇಶನ ಪತ್ನಿ ಪಾರ್ವತಿ ಅವರಿಗೆ ಮಂಜೂರು ಆಗಲು, ಸಿದ್ದರಾಮಯ್ಯ ಅವರು ಪ್ರಭಾವ ಬೀರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.