ಮೈಸೂರು: ಮುಡಾ ಅಕ್ರಮ ನಿವೇಶನ ಹಗರಣಕ್ಕೆ ಸಂಬAಧಿಸಿದAತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು, ಎರಡನೇ ದಿನವಾದ ಶನಿವಾರ ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದರು. ಈ ವೇಳೆ ಎರಡು ಹಾರ್ಡ್ ಡಿಸ್ಕ್ನಲ್ಲಿ ದಾಖಲೆಗಳನ್ನು ಸಂಗ್ರಹಿಸಿ ಕೊಂಡೊಯ್ದಿರುವ ಅಧಿಕಾರಿಗಳು, ವೈಟ್ನರ್ ಹಾಕಿ ತಿದ್ದಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಪತ್ರದ ಮೂಲ ಪ್ರತಿಯನ್ನೂ ಮುಡಾದಿಂದ ವಶಪಡಿಸಿಕೊಂಡಿದ್ದಾರೆ.
ಈ ಹಿಂದೆ ನೋಟಿಸ್ ನೀಡಿದರೂ ಮುಡಾ ಅಧಿಕಾರಿಗಳು ವೈಟ್ನರ್ ಹಾಕಿ ತಿದ್ದಲಾಗಿರುವ ದಾಖಲೆಗಳ ಮೂಲ ಪ್ರತಿಯನ್ನು ಇ.ಡಿ.ಗೆ ನೀಡಲು ಹಿಂದೇಟು ಹಾಕಿದ್ದರು. ಶುಕ್ರವಾರ ಇಡೀ ದಿನದ ವಿಚಾರಣೆ ಬಳಿಕ ಕೊನೆಗೆ ಆ ದಾಖಲೆಗಳನ್ನು ಮುಡಾ ಅಧಿಕಾರಿಗಳು ನೀಡಿದ್ದಾರೆ. ಈ ವೇಳೆ ಆ ಮೂಲ ದಾಖಲೆಯ ಅಸಲಿಯತ್ತು ಪತ್ತೆಗಾಗಿ ಎಫ್ ಎಸ್ ಎಲ್ ಅಧಿಕಾರಿಯನ್ನೂ ಇ.ಡಿ. ಅಧಿಕಾರಿಗಳು ಕರೆಸಿಕೊಂಡು ಪರಿಶೀಲಿಸಿದ್ದಾರೆ.
ಶುಕ್ರವಾರ ನಡೆದ ನಿರಂತರ 12 ಗಂಟೆಗಳ ವಿಚಾರಣೆಯಲ್ಲಿ ಇ.ಡಿ. ಅಧಿಕಾರಿಗಳು, ಮುಖ್ಯಮಂತ್ರಿ ಪತ್ನಿ ಹಿಂದಿರುಗಿಸಿರುವ 14 ನಿವೇಶನಗಳ ಕುರಿತಷ್ಟೇ ಮಾಹಿತಿಯನ್ನು ಕೇಳಿದ್ದರು. ಕೆಸೆರೆ ಗ್ರಾಮದ ಸರ್ವೇ ನಂ. 464ರ ಪ್ರಕರಣ ಹೊರತು ಮತ್ಯಾವ ವಿಚಾರದ ಕುರಿತೂ ಗಮನ ನೀಡದ ಅಧಿಕಾರಿಗಳು, ಪ್ರಕರಣಕ್ಕೆ ಸಂಬAಧಿಸಿ ಎಫ್‌ಡಿಎ, ಎಸ್‌ಡಿಎ, ತಹಸೀಲ್ದಾರ್ ಹಾಗೂ ಇತರರನ್ನೂ ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೇ ಮೈಸೂರು ತಾಲೂಕು ಕಚೇರಿಯಲ್ಲೂ ಇ.ಡಿ. ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ವೈಟ್ನರ್ ಹಾಕಿ ತಿದ್ದಿರುವ ಮುಖ್ಯಮಂತ್ರಿ ಪತ್ನಿ ಅವರ ಪತ್ರದ ಮೂಲ ಪ್ರತಿ, ಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನು ನೀಡುವಂತೆ 10 ದಿನದ ಹಿಂದೆ ಮುಡಾಗೆ ನೀಡಿದ್ದ ನೋಟಿಸ್‌ನಲ್ಲಿ ಇ.ಡಿ. ಸೂಚಿಸಿತ್ತು. ಆದರೆ ವೈಟ್ನರ್ ಹಾಕಿದ್ದ ದಾಖಲೆಯ ಮೂಲ ಪ್ರತಿ ಹಾಗೂ ಶಿಫಾರಸು ಪತ್ರ ಕೊಡಲು ಮುಡಾ ಅಧಿಕಾರಿಗಳು ಮೀನಮೇಷ ಎಣಿಸುತ್ತಾ ಸುಮ್ಮನೆ ಕೂತಿದ್ದರು. ಹೀಗಾಗಿ ಇದೀಗ ಇ.ಡಿ. ಅಧಿಕಾರಿಗಳು ದಾಳಿ ನಡೆಸಿ ತನಿಖೆಗೆ ಅಗತ್ಯವಾದ ಆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.