ಕಾರ್ಕಳ: ಕಾಲುನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಗುಣಮುಖವಾಗದ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮುಡಾರು ನಿವಾಸಿ ಹರಿಪ್ರಸಾದ್(30ವ) ಆತ್ಮಹತ್ಯೆಗೆ ಶರಣಾದ ಯುವಕ. ಹರಿಪ್ರಸಾದ್ ಕಳೆದ ಒಂದು ವರ್ಷದಿಂದ ಎರಡೂ ಕಾಲುಗಳ ನೋವಿನಿಂದ ಬಳಲುತ್ತಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆ ಹಾಗೂ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ. ಜುಲೈ.20 ರಂದು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಆ.5 ರಂದು ಮನೆಗೆ ವಾಪಾಸಾಗಿದ್ದವರು ಕಾಲುನೋವು ಗುಣಮುಖವಾಗದ ಹಿನ್ನಲೆಯಲ್ಲಿ ಮನನೊಂದು ಆ.7 ರಂದು ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















`
