ಹೆಬ್ರಿ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಜರುವತ್ತು ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಬುಧವಾರ (ಫೆ.19) ಪತ್ತೆಯಾಗಿದೆ.
ಶಿವಪುರದ ಮೂರ್ತಿ ಎಂಬವರ ಅಕ್ಕನ ಮಗ ಹರೀಶ್ ಎಂಬವರು ನಾಪತ್ತೆಯಾಗಿದ್ದು, ಆ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರನ್ನು ಹುಡುಕುತ್ತಿದ್ದ ಸಂದರ್ಭ ಮುದ್ರಾಡಿಯ ಜರುವತ್ತು ಸೇತುವೆ ಬಳಿ ಸುಮಾರು 40-45 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪ್ರಕರಣ ದಾಖಲಾಗಿದೆ.
