ಹೆಬ್ರಿ: ಮುದ್ರಾಡಿ ಗ್ರಾಮದ ಕಬ್ಬಿನಾಲೆ ಸಮೀಪದ ಬಲ್ಲಾಡಿ ಎಂಬಲ್ಲಿ ನಿನ್ನೆ ಸಂಭವಿಸಿದ ಭೀಕರ ಮೇಘಸ್ಫೋಟದಿಂದ ಉಂಟಾದ ಪ್ರವಾಹದಲ್ಲಿ ಕಬ್ಬಿನಾಲೆಯ ವೃದ್ದೆಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದು ಅವರ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ. ಚಂದ್ರಾಗೌಡ್ತಿ (85) ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದರು.
ಕಬ್ಬಿನಾಲೆ ಭಾಗದಲ್ಲಿ ಸುರಿದ ಭಾರೀ ಮಳೆಯಿಂದ ಬಮ್ಮಗುಂಡಿ ಹೊಳೆಯು ಉಕ್ಕಿ ಹರಿದು ಬಲ್ಲಾಡಿ ಈಶ್ವರನಗರದ ಆಸುಪಾಸಿನ ನಾಲ್ಕೆöÊದು ಮನೆಗಳಿಗೆ ಹಾಗೂ ಅಡಿಕೆ ತೋಟ, ರಬ್ಬರ್ ತೋಟ ಹಾಗೂ ಭತ್ತದ ಗದ್ದೆಗಳಿಗೆ ನೀರು ನುಗ್ಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಈ ಸಂದರ್ಭದಲ್ಲಿ ಮನೆಯಂಗಳದಲ್ಲಿ ನಿಲ್ಲಿಸಿದ್ದ 2 ಕಾರು ಮತ್ತು ಬೈಕ್ ಪ್ರವಾಹದ ಪಾಲಾಗಿದೆ.