ಮೂಡುಬಿದಿರೆ : ಮನೆಯ ಬಾವಿಯ ಆವರಣ ಸ್ವಚ್ಛಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಮೃತ ದುರ್ದೈವಿಯನ್ನು ಬೆಳುವಾಯಿ ನಿವಾಸಿ ರಾಜು ಶೆಟ್ಟಿ(65) ಎಂದು ಗುರುತಿಸಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಸಿಬಂದಿ ಹರಿಪ್ರಸಾದ್ ಶೆಟ್ಟಿಗಾರ್, ಗಣೇಶ್ ಆಚಾರ್, ಸಂಜಯ್, ಭೀಮಪ್ಪ, ಬಸವರಾಜ್ ಅವರ ತಂಡವು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆಕ್ಕೆತ್ತಿದ್ದಾರೆ.