Share this news

ಮಂಗಳೂರು: ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಮುಲ್ಕಿ ಕಂದಾಯ ನಿರೀಕ್ಷಕ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾದ ಅಧಿಕಾರಿ.

ದೂರುದಾರ ವ್ಯಕ್ತಿ ತಮ್ಮ ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಲಾಗಿತ್ತು. ಈ ಅರ್ಜಿಯನ್ನು ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ಒಂದು ವರ್ಷಕ್ಕಿಂತ ಅಧಿಕ ಕಾಲ ಯಾವುದೇ ಕ್ರಮ ಕೈಗೊಳ್ಳದೇ ಬಾಕಿ ಇರಿಸಿಕೊಂಡಿದ್ದನು. ದೂರುದಾರರು ಡಿಸೆಂಬರ್ 9ರಂದು ಕಂದಾಯ ನಿರೀಕ್ಷಕರ ಕಚೇರಿಗೆ ಹೋಗಿ ಈ ಬಗ್ಗೆ ವಿಚಾರಿಸಿದ್ದಾರೆ. ಆಗ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ ರವರು ಆಸ್ತಿಗೆ ಸಂಬAಧಿಸಿದ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗೆ 4 ಲಕ್ಷ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಆದ್ದರಿಂದ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಡಿಸೆಂಬರ್ 19ರಂದು ಬೆಳಗ್ಗೆ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್, ಸುರತ್ಕಲ್ ಜಂಕ್ಷನ್ ಬಳಿ 4 ಲಕ್ಷ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ ಎಂದು ಲೋಕಾಯಕ್ತ ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *