

ಬೆಂಗಳೂರು,ಆ.25: ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ, ಸಚಿವ ಬಿ.ನಾಗೇಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಸಚಿವ ಸಂಪುಟ ಸಭೆಯ ಅಭಿಪ್ರಾಯ ಕೇಳಲು ಮುಂದಾಗಿರುವುದು ಕುತೂಹಲ ಮೂಡಿಸಿದೆ. ಒಂದು ವೇಳೆ ಸಚಿವ ಸಂಪುಟ ಸಭೆಯು ರಾಜ್ಯಪಾಲರ ಪತ್ರಕ್ಕೆ ಮನ್ನಣೆ ಕೊಡದಿದ್ದರೆ, ರಾಜ್ಯಪಾಲರು ತಮ್ಮ ವಿವೇಚನೆಯಿಂದ ತೆಗೆದುಕೊಳ್ಳುವ ನಿರ್ಧಾರ ಕೈಗೊಂಡರೆ ಸಚಿವ ನಾಗೇಂದ್ರ ರಾಜಕೀಯ ಭವಿಷ್ಯ ಅತಂತ್ರವಾಗಲಿದೆ.
ಜನಪ್ರತಿನಿಧಿಗಳ ವಿರುದ್ಧ ವಿಚಾರಣೆ ನಡೆಸಲು ಸಚಿವ ಸಂಪುಟ ಒಪ್ಪಿಗೆ ಕಡ್ಡಾಯ ಎಂಬುದು ಕೇವಲ ಔಪಚಾರಿಕ ಪ್ರಕ್ರಿಯೆಯಾಗಿದೆ. ಯಾಕೆಂದರೆ ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಡಿ ನೋಟಿಪೀಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಬೇಕೆಂದು ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ಪತ್ರ ಬರೆದಿದ್ದರು.
ಈ ಸಂದರ್ಭದಲ್ಲಿ ಸಚಿವ ಸಂಪುಟ ಸಭೆಯು ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬಾರದು ಎಂದು ಒಂದು ಸಾಲಿನ ನಿರ್ಣಯವನ್ನು ತೆಗೆದುಕೊಂಡಿತ್ತು.ಆದರೆ ರಾಜ್ಯಪಾಲರು ಸಚಿವ ಸಂಪುಟ ಸಭೆಯನಿರ್ಣಯವನ್ನು ತಿರಸ್ಕರಿಸಿದ್ದರು ಎಂಬುದು ಉಲ್ಲೇಖ.ರಾಜ್ಯಪಾಲರ ಕಚೇರಿಯು ಈ ವಿಷಯದಲ್ಲಿ ಕಾನೂನು ಇಲಾಖೆಯ ಅಭಿಪ್ರಾಯ ಪಡೆಯುವ ಪ್ರಕ್ರಿಯೆಗೆ ಮುಂದಾಗಿದೆ. ರಾಜ್ಯಪಾಲರು ಸಚಿವರ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ವಿಚಾರದಲ್ಲಿ ಸರ್ಕಾರದ ನೆರವು ಮತ್ತು ಸಲಹೆಯನ್ನು ಪಡೆಯಬೇಕೇ ಎಂಬ ಪ್ರಶ್ನೆಯೂ ಇದರೊಂದಿಗೆ ಮುನ್ನೆಲೆಗೆ ಬಂದಿದೆ.
ವಾಲೀಕಿ ನಿಗಮದ ನಿಧಿಯ ದುರುಪಯೋಗ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ ಈಗಾಗಲೇ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜ್ಯಪಾಲರಿಗೆ ಅಧಿಕೃತ ಪತ್ರ ಬರೆದಿದೆ.
ರಾಜ್ಯಪಾಲರ ಕಚೇರಿಯು ಈ ಕುರಿತು ಕಾನೂನು ಇಲಾಖೆ ಹಾಗೂ ತಜ್ಞರ ಸಲಹೆಯನ್ನು ಪಡೆದುಕೊಂಡಿದ್ದು, ಸಚಿವ ಸಂಪುಟದ ಅಭಿಪ್ರಾಯ ಮತ್ತು ಸಂವಿಧಾನಿಕ ನಿಯಮಗಳ ಅಡಿಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲು ಸಿದ್ಧತೆ ನಡೆಸಿದೆ. ಸಿಬಿಐ ರಾಜ್ಯ ಸರ್ಕಾರಕ್ಕೆ ಮೊದಲು ಮಾಹಿತಿ ಅಥವಾ ಪತ್ರ ನೀಡಬೇಕಾಗಿತ್ತು ಎಂಬುದು ಸರ್ಕಾರದ ವಾದವಾಗಿದೆ.
ಇದೇ ವಿಚಾರ ಈಗ ಕಾನೂನು ಮತ್ತು ಸಂವಿಧಾನಾತಕ ಚರ್ಚೆಯನ್ನೂ ಹುಟ್ಟುಹಾಕಿದೆ. ವಿಶೇಷವಾಗಿ, ರಾಜ್ಯ ವ್ಯಾಪ್ತಿಯಲ್ಲಿ ಸಿಬಿಐ ತನಿಖೆ ನಡೆಸುವ ಅಧಿಕಾರ, ರಾಜ್ಯದ ಒಪ್ಪಿಗೆ, ಹಾಗೂ ಹಾಲಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರ ಅಧಿಕಾರದ ಮಿತಿಗಳೇನು ಎಂಬುದು ಪ್ರಮುಖ ಪ್ರಶ್ನೆಗಳಾಗಿವೆ.





.
.
.
.
.
.
.
.
.
.
.
.
.
.
.
.
.
.
.
.
