ನವದೆಹಲಿ : ಕಳೆದ 2006ರಲ್ಲಿ ಮುಂಬಯಿನಲ್ಲಿ ನಡೆದ ಭೀಕರ ಸರಣಿ ರೈಲು ಸ್ಫೋಟಗಳಲ್ಲಿ ಭಾಗಿಯಾಗಿದ್ದ 12 ಜನ ಆರೋಪಿಗಳನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಸರಣಿ ರೈಲು ಸ್ಫೋಟದಲ್ಲಿ ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ 12 ಜನ ಅಪರಾಧಿಗಳಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಐವರು ಸೇರಿದ್ದಾರೆ. ಬಿಹಾರದ ಕಮಲ್ ಅನ್ಸಾರಿ, ಮುಂಬೈನ ಮೊಹಮ್ಮದ್ ಫೈಸಲ್ ಅತೌರ್ ರೆಹಮಾನ್ ಶೇಖ್, ಥಾಣೆಯ ಎಹ್ತೆಶಾಮ್ ಕುತುಬುದ್ದೀನ್ ಸಿದ್ದಿಕಿ, ಸಿಕಂದರಾಬಾದ್ನ ನವೀದ್ ಹುಸೇನ್ ಖಾನ್ ಮತ್ತು ಮಹಾರಾಷ್ಟ್ರದ ಜಲಗಾಂವ್‌ನ ಆಸಿಫ್ ಖಾನ್ ರೈಲಿನಲ್ಲಿ ಬಾಂಬ್ ಇಟ್ಟಿದ್ದ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು. ಈ ಪ್ರಕರಣದ ಇತರ 7 ಮಂದಿ ಆರೋಪಿಗಳಾಗಿರುವ ತನ್ವೀರ್ ಅಹ್ಮದ್ ಮೊಹಮ್ಮದ್ ಇಬ್ರಾಹಿಂ ಅನ್ಸಾರಿ, ಮೊಹಮ್ಮದ್ ಮಜೀದ್ ಮೊಹಮ್ಮದ್ ಶಫಿ, ಶೇಖ್ ಮೊಹಮ್ಮದ್ ಅಲಿ ಆಲಂ ಶೇಖ್, ಮೊಹಮ್ಮದ್ ಸಾಜಿದ್ ಮಾರ್ಗುಬ್ ಅನ್ಸಾರಿ, ಮುಜಮ್ಮಿಲ್ ಅತೌರ್ ರೆಹಮಾನ್ ಶೇಖ್, ಸುಹೈಲ್ ಮೆಹಮೂದ್ ಶೇಖ್ ಮತ್ತು ಜಮೀರ್ ಅಹ್ಮದ್ ಲತಿಯುರ್ ರೆಹಮಾನ್ ಶೇಖ್ ಅವರನ್ನು ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆದರೆ ಬಾಂಬೆ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿತ್ತು.
ಇದೀಗ ಅಂತಿಮವಾಗಿ ಸುಪ್ರೀಂ ಕೋರ್ಟ್ ತೀರ್ಪಿನಿಂದ 12 ಜನ ಆರೋಪಿಗಳು ಎಸಗಿರುವ ಹೇಯ ಕೃತ್ಯಕ್ಕೆ ಮತ್ತೆ ಜೈಲೇ ಗತಿಯಾಗಿದೆ.
