ಕಾರ್ಕಳ: ಕಳೆದೆರಡು ತಿಂಗಳಿನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಡ್ಕೂರು ನಿವಾಸಿ ಬಿ. ಮಂಜುನಾಥ (73) ಆತ್ಮಹತ್ಯೆ ಮಾಡಿಕೊಂಡವರು.
ಅವರು ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು, ಅ.30 ರಂದು ರಾತ್ರಿ ಮನೆಯಿಂದ ಹೇಳದೆ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದರು.
ಬಳಿಕ ಮಂಜುನಾಥ ಅವರು ತಮಗಿರುವ ಖಾಯಿಲೆಯಿಂದ ಬಳಲುತ್ತಿದ್ದವರು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಎದುರು ಇರುವ ಮಾಧೋಜಿ ರಾವ್ ಎಂಬವರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.