

ಹೆಬ್ರಿ, ಸೆ.05:: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುನಿಯಾಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿ.ಎಸ್.ಬಿ. ಸಮಾಜ ಬಾಂಧವರ ವತಿಯಿಂದ ಸಹಸ್ರ ಶ್ರೀಕೃಷ್ಣ ನಾಮ ತುಳಸಿ ದಳ ಅರ್ಚನೆ ಭಕ್ತಿಭಾವದಿಂದ ನೆರವೇರಿಸಲಾಯಿತು.
ದೇವಸ್ಥಾನದ ಉತ್ಸವ ಮೂರ್ತಿಯಾದ ಶ್ರೀಕೃಷ್ಣ ದೇವರಿಗೆ ಸಹಸ್ರ ನಾಮಗಳೊಂದಿಗೆ ತುಳಸಿ ದಳಗಳನ್ನು ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.ಬಳಿಕ ಶ್ರೀಕೃಷ್ಣನಿಗೆ ಅರ್ಘ್ಯ ಸಮರ್ಪಿಸುವ ಮೂಲಕ ಜನ್ಮಾಷ್ಟಮಿ ಆಚರಣೆಯನ್ನು ನೆರವೇರಿಸಲಾಯಿತು.
ಸಮಾಜ ಬಾಂಧವರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಕೃಷ್ಣನ ಕೃಪೆಗೆ ಪಾತ್ರರಾದರು. ದೇವಾಲಯದಲ್ಲಿ ಪೂಜಾ ವಿಧಿವಿಧಾನ ಹಾಗೂ ಧಾರ್ಮಿಕ ವಾತಾವರಣದೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದಿಂದ ನೆರವೇರಿತು.





.
.
.
.
.
.
.
.
.
.
.
.
.
.
.
.
.
.
.
.
