

ಹೆಬ್ರಿ,ಆ 06: ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮುನಿಯಾಲು ಸಮೀಪದ ಚಟ್ಕಲ್‌ಪಾದೆ ಸಮೀಪ ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಆ 6 ರಂದು ಮಧ್ಯಾಹ್ನ ಸಂಭವಿಸಿದೆ.
ಕೊಡಗು ಜಲ್ಲೆಯ ಕುಟುಂಬವೊAದು ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಕಾರು ಚಾಲಕ ಹಾಗೂ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾರೆ.


