ಹೆಬ್ರಿ: ಕಬಡ್ಡಿ ಪಟು ದಿ. ಪ್ರೀತಮ್ ಶೆಟ್ಟಿ ಸ್ಮರಣಾರ್ಥ ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಮುನಿಯಾಲು ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ಹೃದಯ ತಪಾಸಣ ಶಿಬಿರ ಮತ್ತು ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಣೆಯು ಮುನಿಯಾಲಿನ ಮುನಿಯಾಲಿನ ಪದ್ಮಾವತಿ ಕಲಾಮಂದಿರದಲ್ಲಿ ಭಾನುವಾರ ಜರುಗಿತು.
ಮುಂಬೈ ಉದ್ಯಮಿಗಳಾದ ಗಿರೀಶ್ ಶೆಟ್ಟಿ ತೆಳ್ಳಾರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು.
ಹಿಂದೂ ಹೆಲ್ಪ್ ಲೈನ್ ನ ಗೌರವಾಧ್ಯಕ್ಷರಾದ ಡಾಕ್ಟರ್ ಸುದರ್ಶನ್ ಹೆಬ್ಬಾರ್, ಮಂಗಳೂರು ಕೆ. ಎಮ್. ಸಿ . ವೈದ್ಯ ಡಾ. ದಿತೇಶ್. ಎಮ್, ಮಣಿಪಾಲ ಕೆ. ಎಮ್. ಸಿ. ವೈದ್ಯ ಡಾ. ಗಣೇಶ್ ಮೋಹನ್, ಕಾಡುಹೊಳೆ ಜಂಗಮೇಶ್ವರ ಮಠದ ಅರ್ಚಕರಾದ ರಾಘವೇಂದ್ರ ಭಟ್, ಕಾರ್ಕಳ ರೋಟರಿ ಕ್ಲಬ್ ನ ಅಧ್ಯಕ್ಷರಾದ ಉಪೇಂದ್ರ ವಾಗ್ಳೆ, ಉದ್ಯಮಿ ಎಮ್. ದಿನೇಶ್ ಪೈ, ಮುನಿಯಾಲು ಬಿಲ್ಲವ ಸಂಘದ ಅಧ್ಯಕ್ಷರಾದ ಟಿ. ಮಂಜುನಾಥ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷ ಸತೀಶ್ ಸಾಲಿಯನ್, ವೆಂಕಟರಮಣ ದೇವಸ್ಥಾನ ಮುನಿಯಾಲು ಇದರ ಆಡಳಿತ ಮೊಕ್ತೇಸರರಾದ ಶ್ರೀಧರ್ ಪೈ, ಮುನಿಯಾಲು ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಭುಜಂಗ ಶೆಟ್ಟಿ, ಸಿ. ಎ. ನಿತೇಶ್ ಶೆಟ್ಟಿ, ಮುಂಬೈ ಉದ್ಯಮಿಗಳಾದ ಹರೀಶ್ ಶೆಟ್ಟಿ ಪಡುಕೂಡೂರು ಮತ್ತು ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಮುನಿಯಾಲು ಇದರ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮುನಿಯಾಲು ಮೊದಲಾದವರು ಉಪಸ್ಥಿತರಿದ್ದರು. ಮುಟ್ಲುಪಾಡಿ ಸುಹಾಸ್ ಶೆಟ್ಟಿ ಸ್ವಾಗತಿಸಿ, ರಾಮಚಂದ್ರ ನಾಯಕ್ ವಂದಿಸಿದರು.
ಸುಮಾರು 150 ಜನರು ಸ್ವಯಂ ಪ್ರೇರಿತ ರಕ್ತದಾನವನ್ನು ಮಾಡಿ 130 ಜನರು ಉಚಿತ ಹೃದಯ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.
ಸುಮಾರು 150 ಜನರು ಸ್ವಯಂ ಪ್ರೇರಿತ ರಕ್ತದಾನವನ್ನು ಮಾಡಿ 130 ಜನರು ಉಚಿತ ಹೃದಯ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.