

ಹೆಬ್ರಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2025-26ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯನ್ನು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸ್ಕಿಲ್ ಇಂಡಿಯಾ, ಫಿಟ್ ಇಂಡಿಯಾ ದಂತಹ ಆಶಯಗಳನ್ನು ಮೈಗೂಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಜಗದೀಶ್ ನಾಯಕ್ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಬೇಬಿ ಶೆಟ್ಟಿಯವರು ಅತಿಥಿಗಳನ್ನು ಸ್ವಾಗತಿಸಿದರು. ಎಸ್ ಡಿ ಎಂ ಸಿ ಯ ಉಪಾಧ್ಯಕ್ಷರಾದ ಹರೀಶ್ ಪೂಜಾರಿ, ಸ್ಥಳೀಯ ಉದ್ಯಮಿ ದಿನೇಶ್ ಪೈ, ಹೆಬ್ರಿಯ ದಾನಿಗಳಾದ ಸತೀಶ್ ಪೈ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮುನಿಯಾಲಿನ ಪ್ರಾಂಶುಪಾಲರಾದ ಪ್ರೊ ಸುಧಾಕರ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಶೆಟ್ಟಿ, ವಿದ್ಯಾರ್ಥಿ ನಾಯಕ ಕು. ಆಯುಷ್ ಶೆಟ್ಟಿ, ಕು.ಶ್ರೇಯಸ್, ಕು.ಸಾತ್ವಿ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ವರ್ಷ ರಾಷ್ಟ್ರ, ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಂಸ್ಥೆಯನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡಾ ತರಬೇತುದಾರ ತಾರಾನಾಥ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಇವರು ಕೊಡಮಾಡಿದ ಧ್ವನಿವರ್ಧಕ ವ್ಯವಸ್ಥೆಯನ್ನು ಶಾಸಕರ ಮೂಲಕ ಸಂಸ್ಥೆಗೆ ಹಸ್ತಾಂತರ ಮಾಡಲಾಯಿತು. ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲ ರವೀಂದ್ರ ರಾವ್ ವಂದಿಸಿದರು. ಉಪನ್ಯಾಸಕ ಅನಿಲ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು.



