
ಹೆಬ್ರಿ, ಜುಲೈ 11: ಮನಿಯಾಲಿನ ನಿವಾಸಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿದ್ದ ನಾಗೇಶ್ ನಾಯಕ್ (65) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ.
ಧಾರ್ಮಿಕ, ಸಾಮಾಜಿಕ ಹಾಗೂ ಜನಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿ, ಸಮಾಜದ ಗೌರವಕ್ಕೆ ಪಾತ್ರರಾಗಿದ್ದರು. ಅವರ ಸರಳ ವ್ಯಕ್ತಿತ್ವ, ಸೌಜನ್ಯ ಹಾಗೂ ಸೇವಾ ಮನೋಭಾವದಿಂದ ಅಪಾರ ಸ್ನೇಹಿತರು ಮತ್ತು ಬಂಧುಗಳ ಪ್ರೀತಿಯನ್ನು ಗಳಿಸಿದ್ದರು.
ಮೃತರು ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.ಅವರ ನಿಧನಕ್ಕೆ ಬಂಧು-ಮಿತ್ರರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
