
ಕಾರ್ಕಳ, ಮೇ.10: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯ ಸರ್ಕಾರದ ಸಚಿವರಾಗಿದ್ದ ಡಿ. ಸುಧಾಕರ್ ಅವರ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.
ಹಿರಿಯೂರು ಶಾಸಕರು, ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರ ಅಗಲುವಿಕೆಯ ಸುದ್ದಿ ಅತ್ಯಂತ ದುಃಖ ತಂದಿದೆ. ಸಾಮಾಜಿಕ ಕಳಕಳಿ, ಜನಪರ ಸೇವೆ ಹಾಗೂ ಸರಳ ವ್ಯಕ್ತಿತ್ವದ ಮೂಲಕ ಜನಮನ ಗೆದ್ದಿದ್ದ ಅವರು ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಅವರ ಅಗಲಿಕೆ ರಾಜ್ಯಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದ್ದು ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಉದಯ ಶೆಟ್ಟಿ ಮುನಿಯಾಲು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
