ಕಾರ್ಕಳ: ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯಲ್ಲಿರುವ ಮಲೆಕುಡಿಯ ಕುಟುಂಬಗಳನ್ನು ಸಂಪರ್ಕಿಸುವ ರಸ್ತೆ ನಿರ್ಮಾಣ, ವಿದ್ಯುತ್, ಸೇತುವೆ ,ವಸತಿ, ನೀರಾವರಿ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂಬ ನಿಟ್ಟಿನಲ್ಲಿ ತಾಲೂಕು ಮಟ್ಟದ, ಜಿಲ್ಲಾಮಟ್ಟದ ಕುಂದು ಕೊರತೆ ಸಭೆ, ಜನ ಸ್ಪಂದನೆ, ಜನಸಂಪರ್ಕ ಸಭೆಗಳು, ಸೇರಿದಂತೆ ಸರಕಾರದ ವಿವಿಧ ಸ್ಥರಗಳಲ್ಲಿ ಕಳೆದ ಎರಡು ದಶಕಗಳಿಂದ ನಿರಂತರವಾಗಿ ಹೋರಾಟಗಳನ್ನು ಮಾಡಿ ಕೊಂಡು ಬಂದ ಹಿನ್ನೆಲೆಯಲ್ಲಿ ಇದೀಗ ಬೇಡಿಕೆ ಗಳಿಗೆ ಹಂತ ಹಂತವಾಗಿ ಸ್ಪಂದನೆ ಸಿಗುತ್ತಿರುವುದು ಸಮುದಾಯದ ಜನರಲ್ಲಿ ಸಂತಸ ಮೂಡಿಸಿದೆ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ನಮ್ಮ ಎಲ್ಲಾ ಬೇಡಿಕೆಗಳು ಪೂರ್ಣ ಪ್ರಮಾಣದಲ್ಲಿ ಈಡಿರುವಂತಾಗಲಿ ಎಂಬುದು ನಮ್ಮ ಆಶಯ ಎಂದು ಶ್ರೀಧರ ಗೌಡ ಈದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.
ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.