ನವದೆಹಲಿ, ಆ 14: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದುಪಡಿಸಿ ಸುಪ್ರೀಂಕೋರ್ಟ್, ದರ್ಶನ್ ವಿಚಾರದಲ್ಲಿ ಅತ್ಯಂತ ಕಠಿಣ ನಿಲುವು ತಳೆದಿದೆ. ಜಾಮೀನು ರದ್ದಾದ ಬೆನ್ನಲ್ಲೇ ಆರೋಪಿ ದರ್ಶನ್ ನನ್ನು ತಕ್ಷಣವೇ ಬಂಧಿಸುವAತೆ ಸುಪ್ರೀಂಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಇದಲ್ಲದೇ ದರ್ಶನ್ ಗೆ ಜೈಲಿನಲ್ಲಿ ವಿಐಪಿ ಆತಿಥ್ಯ ನೀಡಿದರೆ ಹುಷಾರ್ ಎಂದು ಜೈಲು ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ಕೊಟ್ಟಿದೆ.
ಜೈಲಿನಲ್ಲಿ ಯಾರೇ ಆರೋಪಿಗೂ ವಿಐಪಿ ಆತಿಥ್ಯ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ನಿಮ್ಮನ್ನು ಸಸ್ಪೆಂಡ್ ಮಾಡಲಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಉಳಿದ ಎಲ್ಲಾ ಆರೋಪಿಗಳು ಕೂಡ ತಕ್ಷಣವೇ ಪೊಲೀಸರಿಗೆ ಶರಣಾಗಬೇಕು ಇಲ್ಲವಾದರೆ ದರ್ಶನ್ ಅವರನ್ನು ತಕ್ಷಣವೇ ಪೊಲೀಸರು ಅರೆಸ್ಟ್ ಮಾಡುವಂತೆ ಸುಪ್ರೀಂ ಆದೇಶಿಸಿದೆ
ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ರದ್ದು ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಮಾಖ್ಷಿ ಪಾಳ್ಯ ಠಾಣೆ ಪೊಲೀಸರು ಅಲರ್ಟ್ ಆಗಿದ್ದು ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಬಂಧನಕ್ಕೆ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಆರೋಪಿಗಳ ಚಲನವಲನ ಬಗ್ಗೆ ನಿಗಾ ಇಡಲು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಆರೋಪಿಗಳನ್ನು ಅರೆಸ್ಟ್ ಮಾಡಿ ಕೋರ್ಟ್ ಗೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ.