

ಬೆಂಗಳೂರು, ಆ,18 : ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಕಳೆದ 2023ರಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಡಿರುವ ಕೊಲೆ ಆರೋಪದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಕಳೆದ 2023ರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾರ್ವಜನಿಕ ಸಭೆಯಲ್ಲಿ ಸಿದ್ಧರಾಮಯ್ಯ 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂಬ ಹೇಳಿಕೆಯನ್ನು ಆಧರಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಿಎಂ ಸಿದ್ಧರಾಮಯ್ಯ ಕೊಲೆಗಾರ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಸಿದ್ಧರಾಮಯ್ಯ ವಿರುದ್ಧ ಪೊಲೀಸರು ಯಾಕೆ ಸುಮೊಟೋ ಕೇಸ್ ದಾಖಲಿಸಿಕೊಂಡಿಲ್ಲ ಎಂದು ಪೊಲೀಸರ ವಿರುದ್ಧ ಕೂಡ ಆಕ್ರೋಶ ಹೊರಹಾಕಿದ್ದರು. ಈ ವಿಡಿಯೋವನ್ನು ಆಧರಿಸಿ ಬಿಜೆಪಿ ಶಾಸಕರು ಸದನದಲ್ಲಿ ಸಿಎಂ ವಿರುದ್ಧ ತಿಮರೋಡಿ ನೀಡಿರುವ ಕೊಲೆಗಾರ ಹೇಳಿಕೆಯನ್ನು ಪ್ರಸ್ತಾಪಿಸಿದ್ದರು.
ಪ್ರತಿಪಕ್ಷ ಬಿಜೆಪಿ ಶಾಸಕರ ಹೇಳಿಕೆಯನ್ನು ಆಧರಿಸಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್ ದಾಖಲಿಸಲು ಗೃಹ ಸಚಿವ ಪರಮೇಶ್ವರ್ ಸೂಚನೆ ನೀಡಿದ್ದಾರೆ.














