
ಬೆಂಗಳೂರು,ಏ.16 :ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಬೆಂಗಳೂರಿನಲ್ಲಿ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬಾತ ಹಲ್ಲೆ ಮಾಡಿ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿರುವ ಆರೋಪ ಕೇಳಿ ಬಂದಿದೆ. ಮಾಡೆಲ್ ಹಾಗೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿರೋ ಯುವತಿ ಮದುವೆಗೆ ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ಜುಹೇದ್ ಎಂಬಾತ ಆಕೆಯ ಮೇಲೆ ಮನಬಂದAತೆ ಹಲ್ಲೆ ಮಾಡಿದ್ದಾನೆ ಎಂದು ಯುವತಿ ಪುಲಕೇಶಿ ನಗರ ಪೊಲೀಸರಿಗೆ ದೂರು ನೀಡಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದುವೆಯಾಗಲು ನಿರಾಕರಿಸಿದ ಯುವತಿ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಮತ್ತು ನಟಿಯಾಗಿದ್ದು, ಖಾಸಗಿ ಕಂಪನಿಯಲ್ಲೂ ಕೆಲಸ ಮಾಡುತ್ತಿದ್ದಳು ಎನ್ನಲಾಗಿದ್ದು, ಮಾಡೆಲಿಂಗ್ ಇಂಡಸ್ಟ್ರಿಯಲ್ಲಿರುವ ಆರೋಪಿ ಜುಹೇಬ್ ಎಂಬಾತನ ಜೊತೆ ಯುವತಿಗೆ ಪರಿಚಯವಾಗಿ ಇಬ್ಬರು ಸ್ನೇಹಿತರಾಗಿದ್ದರು.ಈಗಾಗಲೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

















.
.
.
.
.
.
.
.
.
.
