Share this news

ಕಾರ್ಕಳ, ಜೂ. 27: ಸ್ವರ್ಣ ಕಾರ್ಕಳ, ಸ್ವಚ್ಛ ಕಾರ್ಕಳ ಎನ್ನುವ ಪರಿಕಲ್ಪನೆಯೊಂದಿಗೆ ಕಳೆದ 21 ವರ್ಷಗಳ ರಾಜಕೀಯ ಜೀವನದಲ್ಲಿ ಶಾಸಕನಾಗಿ,ಸಚಿವನಾಗಿ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸಲು ಶಕ್ತಿಮೀರಿ ಪ್ರಯತ್ನಿಸಿದ್ದೇನೆ. ಇದರ ಜೊತೆಗೆ ವಿಧಾನಸಭೆಯಲ್ಲಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ ಆತ್ಮತೃಪ್ತಿ ನನಗಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.
ಅವರು ಕಾರ್ಕಳದ ಪತ್ರಿಕಾ ಭವನದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಸೇತುವೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮಾತ್ರವಲ್ಲ, ಈ ಕ್ಷೇತ್ರದ ಮೂಲಸೌಕರ್ಯದ ಅಭಿವೃದ್ಧಿಯ ಜೊತೆಗೆ ಈ ನೆಲದ ಸಂಸ್ಕೃತಿ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ಕಾರ್ಕಳವನ್ನು ಮಾದರಿಯ ಕ್ಷೇತ್ರವನ್ನಾಗಿಸುವುದೇ ನನ್ನ ಗುರಿಯಾಗಿದೆ ಎಂದರು.
ಶಾಸಕನಾಗಿ,ಸಚಿವನಾಗಿ ಕ್ಷೇತ್ರದ ಹಳ್ಳಿ,ಹಳ್ಳಿಯ ರಸ್ತೆ, ಸೇತುವೆ, ಕುಡಿಯುವ ನೀರು, ವಿದ್ಯುತ್, ಗ್ರಾಮೀಣ ಸಂಪರ್ಕ ರಸ್ತೆ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಂಪರ್ಕವಿಲ್ಲದ ಗ್ರಾಮಗಳಿಗೆ ರಸ್ತೆ, ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಕಾರ್ಕಳದ ಅಸ್ಮಿತೆಯಾದ ಕಾರ್ಲ ಕಜೆ, ಬಿಳಿ ಬೆಂಡೆ ಸೇರಿದಂತೆ ಸ್ಥಳೀಯ ಉತ್ಪನ್ನಗಳನ್ನು ರಾಷ್ಟ್ರಮಟ್ಟದಲ್ಲಿ ಬ್ರ್ಯಾಂಡ್ ಆಗಿ ಪರಿಚಯಿಸುವ ಪ್ರಯತ್ನ ನಡೆಸಲಾಗಿದೆ.ಇದರ ಜೊತೆಗೆ ಖಾಸಗಿ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ,ಪರಿಸರ ಉತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ನನ್ನ ರಾಜಕಾರಣ ಹಿಂದುತ್ವ ,ಅಭಿವೃದ್ಧಿ ಹಾಗೂ ಯುವ ನಾಯಕತ್ವ ಎನ್ನುವ ಮೂರು ಅಂಶಗಳೊಂದಿಗೆ ಪಕ್ಷದ ಸಿದ್ಧಾಂತ ಹಾಗೂ ಕಾರ್ಯಕರ್ತರಿಗೆ ಬದ್ಧನಾಗಿ ಕೆಲಸ ಮಾಡಿದ್ದು, ನನ್ನ21 ವರ್ಷಗಳ ರಾಜಕಾರಣದಲ್ಲಿ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ ಮತ್ತು ಮುಂದೆಯೂ ಮಾಡುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
ಕಾರ್ಕಳಕ್ಕೆ ಹೊಸ ರೈಲು ಸಂಪರ್ಕ ಬೇಕು ಎನ್ನುವುದು ಬಹುಕಾಲದ ಬೇಡಿಕೆಯಾಗಿದೆ. ಈಗಾಗಲೇ ಉಡುಪಿ–ಕಾರ್ಕಳ–ಧರ್ಮಸ್ಥಳ–ಸಕಲೇಶಪುರ ಹಾಗೂ ಶಿವಮೊಗ್ಗ-ಶೃಂಗೇರಿ-ಧರ್ಮಸ್ಥಳವನ್ನು ಸಂಪರ್ಕಿಸುವ ರೈಲು ಮಾರ್ಗದ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದ್ದು, ಅರಣ್ಯ ಇಲಾಖೆಯ ತಾಂತ್ರಿಕ ತೊಡಕುಗಳನ್ನು ನಿವಾರಿಸಬೇಕಿದೆ ಎಂದರು.

ಜಲಜೀವನ್ ಮಿಷನ್ ಯೋಜನೆಯಡಿ ವರಾಹಿ ಯೋಜನೆಯ ಶೇ.80ರಷ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಹಾಲಾಡಿಯ ಬಳಿ 500 ಮೀಟರ್ ಪೈಪ್ ಲೈನ್ ಗೆ ಅರಣ್ಯ ಇಲಾಖೆಯ ಅನುಮತಿ ದೊರಕದ ಕಾರಣದಿಂದ ವಿಳಂಬವಾಗಿದೆ,ಆದಷ್ಟು ಶೀಘ್ರದಲ್ಲೇ ಈ ಸಮಸ್ಯೆ ಬಗೆಹರಿಯಲಿದೆ ಎಂದರು.

ಅಮೃತ್ ಯೋಜನೆಯಡಿ ಕಾರ್ಕಳ ಪುರಸಭೆಗೆ ₹125 ಕೋಟಿ ವೆಚ್ಚದಲ್ಲಿ ನೀರಿನ ಪೈಪ್‌ಲೈನ್ ಕಾಮಗಾರಿ ನಡೆದಿದ್ದು,ಬಾಹುಬಲಿ ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿನ ರಸ್ತೆ ಅಭಿವೃದ್ಧಿಗಾಗಿ ಒಟ್ಟು ₹5.5 ಕೋ.ರೂ ಅನುದಾನ ಬಿಡುಗಡೆಯಾಗಲಿದ್ದು,
ಮಹಾಮಸ್ತಕಾಭಿಷೇಕದೊಳಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದರು.
ಯೋಜನಾ ಪ್ರಾಧಿಕಾರದ ಸಮಸ್ಯೆ ಕುರಿತು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ ಇಚ್ಚಾಶಕ್ತಿಯೇ ಕಾರಣ, 2021ರ ನಂತರ ಈ ಸಮಸ್ಯೆ ಸೃಷ್ಟಿಯಾಗಿದೆ . ಕಂದಾಯ, ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳ ಜೊತೆ ಜಂಟಿ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಬೇಕಿದೆ ಎಂದರು.
ಭೂಮಾಪಕರ ಧರಣಿ ಕುರಿತು ಮಾತನಾಡಿದ ಸುನಿಲ್ ಕುಮಾರ್, ಕಳೆದ 6 ತಿಂಗಳಿನಿಂದ ಸರ್ವೇಯರ್ ಗಳಿಗೆ ವೇತನ ಪಾವತಿಯಾಗಿಲ್ಲ,ಸರ್ಕಾರದ ಬಳಿ ಹಣವಿಲ್ಲ ಇದು ಕಿತ್ತೋದ ಸರ್ಕಾರ ಎಂದರು.

ಡೀಮ್ಡ್ ಫಾರೆಸ್ಟ್ ಸಮಸ್ಯೆ ಪರಿಹಾರಕ್ಕಾಗಿ ಅರಣ್ಯ ಹಾಗೂ ಕಂದಾಯ ಇಲಾಖೆಗಳು ಜಂಟಿ ಸರ್ವೆ ನಡೆಸುತ್ತಿದ್ದು, ಶೀಘ್ರ ಪರಿಹಾರ ಕಂಡುಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಪರಿಹಾರ ಹೆಚ್ಚಳಕ್ಕೆ ಸಂಸದರು ಹಾಗೂ ಬಿಜೆಪಿ ವತಿಯಿಂದ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ಅಕ್ರಮ–ಸಕ್ರಮ ಸಮಿತಿಗೆ ಶಾಸಕರ ಬದಲಿಗೆ ಡಿಸಿಗಳನ್ನು ನೇಮಿಸಿ, ಸಮಿತಿಯ ಅಧಿಕಾರ ಮೊಟಕುಗೊಳಿಸಿದೆ,ಇದರಿಂದ ಬಡವರ ಸಾವಿರಾರು ಅರ್ಜಿಗಳನ್ನು ಅಧಿಕಾರಿಗಳು ತಿರಸ್ಕರಿಸಿದ ಪರಿಣಾಮವಾಗಿ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದರು.

ಪರಾಜಿತ ಅಭ್ಯರ್ಥಿ ಉದಯ ಶೆಟ್ಟಿ ಕುಮ್ಮಕ್ಕಿನಿಂದ ಪುರಸಭೆ ಮಾಜಿ ಸದಸ್ಯನೊಬ್ಬ ಕಾರ್ಕಳದ ಮಾರಿಗುಡಿ ಕುರಿತಾಗಿ RTI ಮೂಲಕ 781 ಅರ್ಜಿಗಳನ್ನು ಸಲ್ಲಿಸಿದ್ದಾರೆ,ಇವರು ಕಾರ್ಕಳದ ಅಭಿವೃದ್ಧಿ ವಿರೋಧಿಗಳು ಎಂದರು.
ಯಕ್ಷ ರಂಗಾಯಣವನ್ನು ಕರಾವಳಿ ರಂಗಾಯಣ ಎಂದು ಹೆಸರು ಬದಲಿಸಿ ಕಾರ್ಕಳ ತಾಲೂಕಿನಿಂದ ಸ್ಥಳಾಂತರಿಸುವ ಹುನ್ನಾರ ನಡೆದಿದೆ, ಈ ಪ್ರಯತ್ನವನ್ನು ವಿರೋಧಿಸುವುದಾಗಿ ಹೇಳಿದರು.

ಪರಶುರಾಮ ಥೀಮ್ ಪಾರ್ಕ್‌ನ ಇಂದಿನ ದುಸ್ಥಿತಿಗೆ ಮುನಿಯಾಲು ಉದಯ ಶೆಟ್ಟಿಯೇ ಕಾರಣ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಪಕ್ಷದ ರಾಜಕೀಯದ ತೆವಲಿಗೆ ಇಂದು ಥೀಮ್ ಪಾರ್ಕ್ ಬಲಿಯಾಗಿದೆ ಎಂದರು.

ನಂದಳಿಕೆಯಲ್ಲಿ ಕವಿಮುದ್ದಣ ಹೆಸರಿನಲ್ಲಿರುವ 9 ಎಕರೆ ಜಾಗದಲ್ಲಿ ಸಾಹಿತ್ಯ ಚಟುವಟಿಕೆಗಳ ಕೇಂದ್ರ ನಿರ್ಮಿಸುವ ಯೋಜನೆ ಇದೆ. ವರಂಗ ಕೆರೆ ಹಾಗೂ ರಾಮಸಮುದ್ರವನ್ನು ಪ್ರವಾಸೋದ್ಯಮ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಕನಸಿದೆ. ಗ್ರಾಮೀಣ ಭಾಗಗಳಲ್ಲಿ ಮಿನಿ ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು. ಕಾರ್ಕಳದ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ಹೇಳಿದರು.
ಕಾರ್ಕಳವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು,ಆದರೆ ವಿಘ್ನ ಸಂತೋಷಿಗಳು ಅಭಿವೃದ್ಧಿಗೆ ಅಡ್ಡ ಗಾಲು ಹಾಕುತ್ತಿದ್ದಾರೆ,ಇದರಿಂದ ನಾವು ವಿಚಲಿತವಾಗದೇ ಕ್ಷೇತ್ರದ ಕೆಲಸ ಮಾಡುವುದಾಗಿ ಹೇಳಿದರು.
ಕರಾವಳಿಯ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಉತ್ತಮ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಮುಂದಾದರೆ ಅಭಿವೃದ್ಧಿಯ ದೃಷ್ಟಿಯಿಂದ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದರು.

ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರಿಫ್ ಮಾತನಾಡಿದರು

ಸಭೆಯಲ್ಲಿ ಪ್ರದಾನ ಕಾರ್ಯದರ್ಶಿ ಹರಿಶ್ ಸಚ್ಚರಿಪೇಟೆ,ಜಿಲ್ಲಾ ಉಪಾಧ್ಯಕ್ಷ ಉದಯ ಕುಮಾರ್ ಮುಂಡ್ಕೂರು,ಕೊಶಾಧಿಕಾರಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.

 

   

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *