ಕಾರ್ಕಳ: ಕಾರ್ಕಳ ಕಸಬಾ ವ್ಯಾಪ್ತಿಯ ಹಿಮ್ಮುಂಜೆ ಕಜೆ ಎಂಬಲ್ಲಿನ ಮನೆಯೊಂದರಲ್ಲಿ ಬುಧವಾರ ಮುಂಜಾನೆ ನಿಗೂಢ ಸ್ಫೋಟ ಸಂಭವಿಸಿದೆ. ಈ ಸ್ಪೋಟದಲ್ಲಿ ಮನೆಯ ಛಾವಣಿ ಸಂಪೂರ್ಣ ಧ್ವಂಸವಾಗಿದ್ದು,ಇಬ್ಬರು ಮಹಿಳೆಯರ ಸಹಿತ ಹಲವರಿಗೆ ಗಾಯಗಳಾಗಿವೆ.
ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನ ಮನೆಯಲ್ಲಿ ಹಲವು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿತ್ತು ಎನ್ನಲಾಗಿದ್ದು, ಎಂದಿನಂತೆ ಬುಧವಾರ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
ಈ ಘಟಕದಲ್ಲಿ ಬಳಿ ಹಲವಾರು ಮನೆಗಳಿದ್ದು, ಈ ಪೈಕಿ ಒಂದು ಮನೆಯಲ್ಲಿ ಸ್ಫೋಟಕ್ಕೆ ಸಂಭವಿಸಿದ್ದು, ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದರೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ ಸ್ಫೋಟಕ್ಕೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಆದರೆ ಸಿಡಿಮದ್ದು ತಯಾರಿಕಾ ಘಟಕಗಳ ಸ್ಥಾಪನೆಗೆ ಸರ್ಕಾರದಿಂದ ಸಾಕಷ್ಟು ನಿಬಂಧನೆಗಳಿವೆ. ಜನವಸತಿ ಪ್ರದೇಶಗಳಲ್ಲಿ ಇಂತಹ ಘಟಕ ಸ್ಥಾಪನೆಗೆ ಅನುಮತಿ ಇಲ್ಲ, ಕೇವಲ ನಿರ್ಜನ ಪ್ರದೇಶಗಳಲ್ಲಿ ಮಾತ್ರ ಇಂತಹ ಅಪಾಯಕಾರಿ ಘಟಕಗಳನ್ನು ಸ್ಥಾಪಿಸಲು ಸರ್ಕಾರ ಅತ್ಯಂತ ಕಠಿಣ ಷರತ್ತುಗಳನ್ನು ವಿಧಿಸಿ ಅನುಮತಿ ನೀಡುತ್ತದೆ.
ಆದರೆ ಈ ಸ್ಪೋಟ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ
