ಕಾರ್ಕಳ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರ ಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ. ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವರುಣ್ ಜೆ. ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಗೌರಿ ಬೋರ್ಕರ್ ತೇರ್ಗಡೆಗೊಂಡಿದ್ದಾರೆ.
ಇವರಿಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.