ಕಾರ್ಕಳ: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ನಾಗರಹಾವು ಕಚ್ಚಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ತಾಲೂಕಿನ ನಲ್ಲೂರು ಪರಪ್ಪಾಡಿಯ ಸಂತೋಷ್ (32) ಮೃತಪಟ್ಟವರು.
ಸಂತೋಷ್ ಅವರು ಫೆ.19 ರಂದು ಮನೆಯ ಬಳಿ ಕೃಷಿ ಕೃಷಿ ಕೆಲಸದಲ್ಲಿ ತೊಡಗಿದ್ದ ವೇಳೆ ಅವರ ಕಾಲಿಗೆ ನಾಗರಹಾವು ಕಚ್ಚಿತ್ತು.ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಫೆ.25ರಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿ
ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಸಂತೋಷ್ ಅವರು ಮಾ.2 ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

K