

ಕಾರ್ಕಳ,ನ.09: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಎಂಬಲ್ಲಿ ಸಂಭವಿಸಿದೆ.
ವಿಠಲ ಆಚಾರ್ಯ (60) ಎಂಬವರು ವಿಪರೀತ ಕುಡಿತದ ಚಟವನ್ನು ಹೊಂದಿದ್ದು, ಶನಿವಾರ ಸಂಜೆ ಬೆಳ್ಮಣ್ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಮುಗಿಸಿಕೊಂಡು ರಾತ್ರಿ 09:30ಕ್ಕೆ ಮನೆಗೆ ಬಂದವರು ಹೊರಗಡೆ ಮನೆಯ ಜಗಲಿಯಲ್ಲಿ ಕುಳಿತ್ತಿದ್ದವರು ತದನಂತರ ರಾತ್ರಿ 10 ಗಂಟೆಗೆ ಸುಮಾರಿಗೆ ನೆರೆಮನೆಯ ನಿವಾಸಿ ಉದಯ ಶೆಟ್ಟಿ ಎಂಬವರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


































.
.
.
.
.
.
.
.
.
.
.
.
.
.
.
.
.
.
.
.
