

ಬೆಂಗಳೂರು,ಅ. 29: ಇಂದು ನಡೆದ ಸಚಿವ ಸಂಪುಟದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿಗೆ 8 ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಕೆಎಂಎಫ್ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ಅನ್ವಯವಾಗುವಂತೆ 8 ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಪರಿಷ್ಕೃತ ದರವು ನವೆಂಬರ್ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ 8 ರೂಪಾಯಿ ಪೈಕಿ ರೈತರಿಗೆ 7 ರೂಪಾಯಿ ಮತ್ತು ಉಳಿದ 1 ರೂಪಾಯಿ ಒಕ್ಕೂಟಗಳಿಗೆ ಸಿಗಲಿದೆ. ಒಕ್ಕೂಟಗಳು ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅಂತಿಮವಾಗಿ 90:10ರಂತೆ ದರ ಏರಿಸಲಾಗಿದೆ.
ಪಶು ಆಹಾರದ ಬೆಲೆ ಏರಿಕೆ, ನಿರ್ವಹಣಾ ವೆಚ್ಚ ಹಾಗೂ ಹೈನುಗಾರಿಕೆ ವೆಚ್ಚ ಗಣನೀಯವಾಗಿ ಹೆಚ್ಚಾದ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳು ಹಲವು ತಿಂಗಳುಗಳಿಂದ ಸರ್ಕಾರವನ್ನು ಒತ್ತಾಯಿಸುತ್ತಿದ್ದವು. ಈ ಸಂಬಂಧ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಕಳೆದ ತಿಂಗಳು ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸಂಪುಟವು ಅಂತಿಮವಾಗಿ ದರ ಏರಿಕೆಗೆ ಹಸಿರು ನಿಶಾನೆ ತೋರಿದೆ.
ಇನ್ನು ಬಸ್ ಟಿಕೆಟ್ ದರ ಏರಿಕೆ ಬಗ್ಗೆಯೂ ಸಂಪುಟದಲ್ಲಿ ಚರ್ಚೆಯಾಗಿದೆ. ಆದರೆ, ಸಂಪುಟ ಟಿಕೆಟ್ ದರ ಏರಿಕೆಯನ್ನು ಸಾರಿಗೆ ಇಲಾಖೆಗೆ ಬಿಟ್ಟಿದ್ದು, ಇಲಾಖೆ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿದ್ದು, ನವೆಂಬರ್ 5 ರಂದು ಸಾರಿಗೆ ದರ ಹೆಚ್ಚಳ ತೀರ್ಮಾನವಾಗಲಿದೆ.





.
.
.
.
.
.
.
.
.
.
.
.
.
.
.
.
.
.
.
.
