ಹೆಬ್ರಿ,ಆ29: ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಕನ್ಯಾನ ನರಸಿಂಹ ಪ್ರಭು ಅವರು ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.
ಬೆಳಗ್ಗೆ ಏಕಾಎಕಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರೇ ಸ್ವತಃ ಕಾರನ್ನು ಚಲಾಯಿಸಿಕೊಂಡು ಹೆಬ್ರಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಚಿಕಿತ್ಸೆಗೆಂದು ಮಣಿಪಾಲ ಆಸ್ಪತ್ರೆಗೆ ಸಾಗಿಸುವಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.