
ಹೆಬ್ರಿ,ಮಾ.21: ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅವರ ತಾಯಿ ಕಮಲಾ ಪೂಜಾರಿ(90) ಅವರು ಶನಿವಾರ ಮುಂಜಾನೆ ಮುದ್ರಾಡಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಕಮಲಾ ಪೂಜಾರಿಯವರು ಮುದ್ರಾಡಿ ಗ್ರಾಮ ಪಂಚಾಯತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮುದ್ರಾಡಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.
ಮೃತರ ನಿಧನಕ್ಕೆ ಕಾರ್ಕಳ ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ್ ಶೆಟ್ಟಿ ತೀವ್ರ ಸಂತಾಪ ಸೂಚಿಸಿದ್ದು,
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.















.
.
.
.
.
.
.
.
.
.
