ಕಾರ್ಕಳ: ಮಂಗಳೂರು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ169ರ ಕಾಮಗಾರಿಯ ಅವಾಂತರ ಮತ್ತೆ ಮುಂದುವರಿದಿದೆ.
ಸೋಮವಾರ ರಾತ್ರಿ ಸುರಿದ ಮಳೆಗೆ ರತ್ನಾಕರ್ ಕಾಮತ್ ರವರ ಮನೆಗೆ ನೀರು ನುಗ್ಗಿ ಅಪಾರ ನಷ್ಟ ಸಂಭವಿಸಿದೆ ಮಾತ್ರವಲ್ಲದೇ ಕಾಂಪೌಂಡ್ ತಡೆಗೋಡೆ ಕುಸಿದು ಸುಮಾರು ಎರಡು ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ
ಮಳೆ ನೀರು ಸರಾಗವಾಗಿ ಹರಿದು ಹೋಗಲು ಶಾಶ್ವತವಾದ ಚರಂಡಿ ವ್ಯವಸ್ಥೆ ಮಾಡದಿದ್ದರೆ ಹೋರಾಟ ಅನಿವಾರ್ಯ ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಸಿದ್ದಾರೆ.
ಮಳೆನೀರಿನ ಆವಾಂತರ ಕುರಿತು ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು ,ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಾಣೂರು ನರಸಿಂಹ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರನ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು