
ಕಾರ್ಕಳ,ಮೇ.09: ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ ಎನ್ ಡಿ ಎ-1 ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಕಾಲೇಜಿನ ಸುಕ್ಷಿತ್ ಗಿರೀಶ್ ಗೌಡ, ಸಂವಿತ್ ಅಮಿತ್ ಗೋಕರ್ಣ, ಅಭಿಷೇಕ್ ಜೋಶಿ ಮತ್ತು ನಾಗದೇವ್ಎಂ.ಜಿ. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಗೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲರು, ಆಡಳಿತ ಮಂಡಳಿ,ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ಪರೀಕ್ಷಾ ಸಂಯೋಜಕರಾದ ಸುಮಂತ್ ದಾಮ್ಲೆ ಅಭಿನಂದನೆ ಸಲ್ಲಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
