ಕಾರ್ಕಳ: ಕಳೆದ 30 ವರ್ಷಗಳ ಹಿಂದೆ ಮನೆಯನ್ನು ತೊರೆದು ಕಾರ್ಕಳ ತಾಲೂಕಿನ ನೀರೆ ಪರಿಸರದಲ್ಲಿ ಭಿಕ್ಷಾಟನೆ ಮಾಡಿಕೊಂಡಿದ್ದ ವ್ಯಕ್ತಿ ಅಸೌಖ್ಯದಿಂದ ಮೃತಪಟ್ಟಿದ್ದಾರೆ.
ಹೆಬ್ರಿ ಗ್ರಾಮದ ಮುದ್ರಾಡಿಯ ಕೃಷ್ಣ (56ವ) ಎಂಬವರು 30 ವರ್ಷಗಳ ಹಿಂದೆ ತಮ್ಮ ಮನೆಯನ್ನು ಬಿಟ್ಟು ನೀರೆಯಲ್ಲಿ ಭಿಕ್ಷಾಟನೆ ಮಾಡಿಕೊಂಡು ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಮಲಗಿ ಜೀವನ ಸಾಗಿಸುತ್ತಿದ್ದರು. ಅವರು ಜುಲೈ.21 ರಂದು ಅನಾರೋಗ್ಯ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿದ್ದು, ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.