ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಉಡುಪಿ- ಕಾರ್ಕಳ ಹೆದ್ದಾರಿಯಲ್ಲಿ ಬೈಕಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನೀರೆ ಅಂಚೆ ಕಛೇರಿಯ ಶಾರದ ವೇದಿಕೆಯ ಬಳಿ ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆ ಯಿಂದ ಚಲಾಯಿಸಿಕೊಂಡು ಬಂದ ಲಾರಿ, ಬೈಲೂರಿನಿಂದ ಉಡುಪಿಗೆ ಹೋಗುತ್ತಿದ್ದ ರಾಜು (70) ಎಂಬವರ ಬೈಕಿಗೆ ಡಿಕ್ಕಿಯಾದ ಪರಿಣಾಮ ರಾಜು ರವರು ಬೈಕ್ ಸಹಿತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
