ಕಾರ್ಕಳ: ತಾಲೂಕಿನ ನೀರೆ ಗ್ರಾಮದ ಪಳ್ಳಿ ಕ್ರಾಸ್ ಬಳಿ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿಯಾಗಿ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೆ. 16 ರಂದು ಬೊಗ್ಗು (65) ಎಂಬವರು ಪಳ್ಳಿ ಕ್ರಾಸ್ ಬಳಿ ಬೈಲೂರು ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಬೈಲೂರು ಕಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಬೊಗ್ಗು ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರಿಗೆ ಬೈಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.