ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ನೀರೆಜಡ್ಡು ಎಂಬಲ್ಲಿ ಸ್ಕೂಟರ್ ಸ್ಕಿಡ್ ಆದ ಪರಿಣಾಮ ಸಹಸವಾರೆ ಮಹಿಳೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಷಾ ಅವರು ಆಗಸ್ಟ್ 3 ರಂದು ಪತಿಯೊಂದಿಗೆ ಉಡುಪಿ ಆಂಬಲಪಾಡಿ ದೇವಸ್ಥಾನಕ್ಕೆ ಹೋಗಿ ವಾಪಾಸಾಗುತ್ತಿದ್ದ ವೇಳೆ ನೀರೆಜಡ್ಡು ಎಂಬಲ್ಲಿ ರಸ್ತೆಯಲ್ಲಿದ್ದ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಹಿಂಬದಿ ಕುಳಿತಿದ್ದ ಉಷಾ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರಿಗೆ ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ , ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.