Share this news

 

 

 

ಕಾರ್ಕಳ: ಇತಿಹಾಸ ಪ್ರಸಿದ್ದ ಏಳೂವರೆ ಮಾಗಣೆಯ ಒಡೆಯ ಎಳ್ಳಾರೆ ಇರ್ವತ್ತೂರು ಮಹತೋಭಾರ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ಏ 3ರಂದು ಬೆಳಗ್ಗೆ 9 ಗಂಟೆಯಿAದ ನೂತನ ದ್ವಜಸ್ತಂಬ ಪ್ರತಿಷ್ಠೆ, ಶ್ರೀ ಉಮಾಮಹೇಶ್ವರ ದೇವರ ಸ್ಥಾಪನೆ, ಶ್ರೀ ಲಕ್ಷ್ಮಿ ಜನಾರ್ಧನ ದೇವರಿಗೆ ಅಷ್ಟೋತ್ತರ ಶತಕಲಶ ಸಹಿತ ಬ್ರಹ್ಮಕಲಶಾಭಿಷೇಕ, ಧಾರ್ಮಿಕ ಸಭಾ ಕಾರ್ಯಕ್ರಮವು ನಡೆಯಲಿದೆ
ಈ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ , ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಂಜೆ 5 ರಿಂದ ಭದ್ರಕ ಮಂಡಲ ಪೂಜೆ, ಗಣಪತಿ ದುರ್ಗಾದೇವಿಗೆ ವಿಶೇಷ ಪೂಜೆ, ಶ್ರೀ ಲಕ್ಷ್ಮಿ ಜನಾರ್ಧನ ದೇವರಿಗೆ ರಂಗ ಪೂಜೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *