Share this news

ಬೆಂಗಳೂರು: ಈ ಬಾರಿಯ ಭಾರೀ  ಮಳೆ ಗೆ ರಾಜ್ಯದಲ್ಲಿ ಭೂಕುಸಿತಗಳು ಉಂಟಾಗಿದ್ದು ಅನೇಕ ಸಾವು ನೋವುಗಳು ಸಂಭವಿಸಿದೆ. ಅಲ್ಲದೇ ಕೇರಳದ ವಯನಾಡಿನಲ್ಲಿ ಉಂಟಾದ ಭೀಕರ ಭೂಕುಸಿತದಿಂದ ಎಚ್ಚೆತ್ತ ಕರ್ನಾಟಕ ಸರ್ಕಾರ ಇದೀಗ ಭೂ ಕುರಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿಗೆ ತರಲು ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬAಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡAತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ಹೇಳಿದ್ದಾರೆ.

                        

                          

                        

                          

 

`

Leave a Reply

Your email address will not be published. Required fields are marked *