

ಬೆಂಗಳೂರು,ಅ.26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ “ಸ್ಟಿಂಗ್ ಆಪರೇಷನ್” ಪ್ರಕರಣಕ್ಕೆ ಸಂಬAಧಿಸಿದAತೆ ವಿಡಿಯೋದಲ್ಲಿದ್ದ ಮಹಿಳೆಯು ಸಿಸಿಬಿ ಪೊಲೀಸರ ಮುಂದೆ ಮಹತ್ವದ ಹೇಳಿಕೆ ನೀಡಿದ್ದಾರೆ.ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ ನನಗೆ ಗೊತ್ತಿಲ್ಲ, ಅವರನ್ನು ಭೇಟಿಯೂ ಆಗಿಲ್ಲ. ನನಗೆ ಏನು ಹೇಳಿಕೊಟ್ಟಿದ್ದರೋ ಅದೇ ರೀತಿ ಹೇಳಿಕೆ ನೀಡಿದ್ದೆ ಎಂದು ಮಹಿಳೆ ಪೊಲೀಸ್ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿಡಿಯೋದಲ್ಲಿರುವ ಮಹಿಳೆಯನ್ನು ಪತ್ತೆ ಹಚ್ಚಿರುವ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ನೋಟಿಸ್ ನೀಡಿ ಆಕೆಯ ವಿಚಾರಣೆ ನಡೆಸಿ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳು ಎಂಬುದು ನನಗೆ ಗೊತ್ತು. ಆದರೆ, ಅವರು ವೈಯಕ್ತಿಕವಾಗಿ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿಲ್ಲ ಎಂದು ಆಕೆ ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬAಧ ಮಂಗಳೂರು ಮೂಲದ ಕಾಂಗ್ರೆಸ್ ಮುಖಂಡೆ ಹಾಗೂ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಅವರನ್ನು ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ.ಪೊಲೀಸರ ನೋಟಿಸ್ಗೂ ಮೊದಲೇ ತನಿಖಾಧಿಕಾರಿಗಳ ಮುಂದೆ ಹಾಜರಾದ ಕೃಪಾ ಆಳ್ವ ಅವರನ್ನು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಲಾಗಿದೆ.
ಪ್ರಕರಣ ಸಂಬAಧ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಜೆಡಿಎಸ್ ಸಾಮಾಜಿಕ ಜಾಲತಾಣದ ಮುಖಸ್ಥ ಚಂದನ್ ಹಾಗೂ ಮೋಹನ್ಗೌಡ ಶೋಧ ಕಾರ್ಯ ನಡೆಯುತ್ತಿದೆ. ಮೋಹನ್ ಗೌಡ ಅವರ ನಿವಾಸಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲಿಸಿದ್ದಾರೆ. ಅವರ ಮನೆಯಲ್ಲಿದ್ದ ಪೆನ್ ಡ್ರೈವ್ಗಳನ್ನು ಜಪ್ತಿ ಮಾಡಿದ್ದಾರೆ. ಈ ಇಬ್ಬರಿಗೂ ತಾವು ಬಳಸುವ ಮೊಬೈಲ್ ಹಾಗೂ ಲ್ಯಾಪ್ಟಾಪ್ ಸೇರಿ ಇತರೆ ಎಲೆಕ್ಟ್ರಾನಿಕ್ ವಸ್ತುಗಳ ಸಮೇತ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದೆ. ಅಲ್ಲದೆ, ಪ್ರಕರಣದಲ್ಲಿ ಎಸ್.ಶಿವಸ್ವಾಮಿ ಎಂಬುವರ ಹೆಸರು ಕೇಳಿ ಬಂದಿದ್ದು, ಅವರಿಗಾಗಿಯೂ ಪೊಲೀಸರು ಶೋಧ ನಡೆಸುತ್ತಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
