ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ ಎನ್‌ಐಎ ಅಧಿಕಾರಿಗಳು ತೀವೃ ತನಿಖೆಯ ಬಳಿಕ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದಲ್ಲದೇ ಈ ಸ್ಪೋಟ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಶಾಮೀಲಾಗಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇಬ್ಬರು ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಎಂಬವರ ಅಸಲಿ ಪೋಟೋಗಳನ್ನು ಬಿಡುಗಡೆ ಮಾಡಿದ್ದು, ಅವರ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳು ಎಲ್ಲೇ ಅಡಗಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲವೆಂದಿರುವ ರಾಷ್ಟ್ರೀಯ ತನಿಖಾ ದಳವು ತನ್ನ ಟ್ವಿಟರ್ ಖಾತೆಯಲ್ಲಿ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಎಂಬುವರ ಫೋಟೋ ಪ್ರಕಟಿಸಿ 10 ಲಕ್ಷ ಬಹುಮಾನ ಘೋಷಣೆ ಮಾಡಿದೆ