ಬೆಂಗಳೂರು: ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬಾಂಬ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಎನ್‌ಐಎ ಮಹತ್ವದ ಮಾಹಿತಿಯನ್ನು ಕಲೆ ಹಾಕಿದೆ ಎನ್ನುವ ಮಾಹಿತಿ ಲಭಿಸಿದೆ. ಬಾಂಬರ್ ತುಮಕೂರು ಮೂಲಕ ಬಳ್ಳಾರಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಪರಾರಿಯಾಗಿದ್ದಾನೆ ಎನ್ನುವುದು ಪ್ರಾಥಮಿಕ ಹಂತದ ತನಿಖೆಯಲ್ಲಿ ಬಯಲಾಗಿದೆ.
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸ್ಪೋಟಕ ಪ್ರಕರಣ ಸಂಬAಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಮೂಲಕ ರಾಮೇಶ್ವರಂ ಕೆಫೆಗೆ ತೆರಳಿದ್ದ ಬಾಂಬರ್, ಅಲ್ಲಿ ಬಾಂಬ್ ಇಟ್ಟು ಟೈಮರ್ ಸೆಟ್ ಮಾಡಿ ಬಾಂಬ್ ಸ್ಪೋಟಿಸಿ ಪರಾರಿಯಾಗಿದ್ದ. ಆತನ ಪತ್ತೆಗಾಗಿ ಈಗಾಗಲೇ ರೇಖಾ ಚಿತ್ರ, ಪೋಟೋ ಬಿಡುಗಡೆ ಮಾಡಿರುವ ಎನ್‌ಐಎ ಅಧಿಕಾರಿಗಳು, ಆತನ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಕೂಡ ಘೋಷಣೆ ಮಾಡಿದ್ದಾರೆ.
ಬೆಂಗಳೂರಲ್ಲಿ ಬಾಂಬ್ ಸ್ಪೋಟಿಸಿದ ಬಳಿಕ ಬಾಂಬರ್ ತುಮಕೂರು ಮೂಲಕ ಬಳ್ಳಾರಿಗೆ ತೆರಳಿರೋ ಮಾಹಿತಯನ್ನು ಎನ್‌ಐಎ ಪತ್ತೆ ಹಚ್ಚಿದ್ದಾರೆ. ಈ ಕಾರಣದಿಂದಾಗಿಯೇ ಬಳ್ಳಾರಿ, ತುಮಕೂರಿನ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ವೀಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿಯ ಕೇಂದ್ರ ಬಸ್ ನಿಲ್ದಾಣಕ್ಕೆ ನಿನ್ನೆ ತಡರಾತ್ರಿಯೇ ಬಂದಿರುವ ಎನ್‌ಐಎ ಅಧಿಕಾರಿಗಳ ತಂಡವು, ಶಂಕಿತ ಉಗ್ರನ ಮಾಹಿತಿಯನ್ನು ಪರಿಶೀಲನೆ ನಡೆಸಿದೆ. ಬಳ್ಳಾರಿಯ ಕೇಂದ್ರ ಬಸ್ ನಿಲ್ದಾಣದಲ್ಲಿನ 10ಕ್ಕೂ ಹೆಚ್ಚು ಸಿಸಿಟಿವಿ ವೀಡಿಯೋಗಳನ್ನು ಪರಿಶೀಲನೆ ನಡೆಸಿದ್ದಾರೆ.
ಸತತ 9 ಗಂಟೆಯವರೆಗೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಎನ್‌ಐಎ ಹಾಗೂ ಬಳ್ಳಾರಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಜಾಲಾಡಿದ್ದಾರೆ. ಅಲ್ಲಿನ ಸಿಸಿಟಿವಿ ಚಹರೆ ಆಧರಿಸಿ, ಆರೋಪಿಯು ಹೊರ ರಾಜ್ಯಗಳಿಗೆ ಎಸ್ಕೇಪ್ ಆಗಿರೋ ಮಾಹಿತಿಯನ್ನು ಕಲೆಹಾಕಿದ್ದಾರೆ.ಬಳ್ಳಾರಿಯಿಂದ ಬೀದರ್ ಮೂಲಕ ಹೊರ ರಾಜ್ಯಗಳಿಗೆ ಬಾಂಬರ್ ಎಸ್ಕೇಪ್ ಆಗಿರೋದಾಗಿ ಎನ್‌ಐಎ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಜೊತೆಗೆ ಆತ ಹಿಂದಿಯನ್ನು ಮಾತನಾಡುತ್ತಿದ್ದ ಎನ್ನುವ ಮಾಹಿತಿಯನ್ನು ಕಲೆ ಹಾಕಿ, ಅಪರಿಚಿತ ಬಾಂಬರ್ ಬಂಧನಕ್ಕೆ ಬಲೆ ಬೀಸಿದ್ದಾರೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.