Share this news

ಕಾರ್ಕಳ : ತಾಲೂಕಿನ ನಿಟ್ಟೆ ಗ್ರಾಮದ ನಿವಾಸಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ನಿಟ್ಟೆ ಗ್ರಾಮದ ವಸಂತ (45) ಮೃತಪಟ್ಟವರು. ಅವರು ಶಿಲ್ಪಿ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತದ ಚಟವನ್ನು ಹೊಂದಿದ್ದರು. ಕಳೆದ ಮೂರು ತಿಂಗಳಿನಿಂದ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದ ವಸಂತ ಅವರು ಬುಧವಾರ ಮಧ್ಯಾಹ್ನ ಮನೆಯಲ್ಲಿರುವಾಗ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಡಾ. ಟಿ.ಎಂ.ಎ. ಪೈ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರನ್ನು ಪರೀಕ್ಷಿಸಿದ ವೈದ್ಯಾಧಿಕಾರಿಯವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

    

                        

                          

                        

                       

Leave a Reply

Your email address will not be published. Required fields are marked *