Share this news

ಕಾರ್ಕಳ: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಬೈಕ್ ಸವಾರ ಮೃತಪಟ್ಟಿದ್ದಾರೆ.

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ (ಮೇ.13) ರಂದು ಈ ದುರ್ಘಟನೆ ಸಂಭವಿಸಿದ್ದು, ಶ್ರೇಯಾನ್‌ ಎಂಬಾತ ಬೈಕಿನಲ್ಲಿ ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ನಿಟ್ಟೆ ಗ್ರಾಮದ ಬೆರಂದೊಟ್ಟು ಕ್ರಾಸ್ ಬಳಿ ಕಾರ್ಕಳದಿಂದ ನಿಟ್ಟೆ ಕಡೆಗೆ ಹೋಗುತ್ತಿದ್ದ ರಮೇಶ ಅವರ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾರ್ಕಳ ಡಾ. ಟಿಎಂಎ ಪೈ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಮೇಶ್‌ ಎನ್‌ ರವರು ಮೃತಪಟ್ಟಿದ್ದಾರೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.

 

 

 

Leave a Reply

Your email address will not be published. Required fields are marked *